ವಿಜಯಪುರ: ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಸುಮಾರು 20ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.
ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ವಿದ್ಯುತ್ ಕಂಬದಿಂದ ಬೆಂಕಿ ಪ್ರವಹಿಸಿ, ಅನಂತರ ಜಪ್ತಿ ಮಾಡಿ ನಿಲ್ಲಿಸಿದ್ದ ವಾಹನಗಳ ಕಡೆಗೆ ಹೊತ್ತಿಕೊಂಡಿದೆ. ಇದರಿಂದಾಗಿ ಸೀಜ್ ಮಾಡಿ ನಿಲ್ಲಿಸಿದ್ದ ಬೈಕ್, ಕಾರು ಸೇರಿ ಅನೇಕ ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಅಪಘಾತ ಪ್ರಕರಣ ಸೇರಿ ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಲಾಗಿದ್ದ 20ಕ್ಕೂ ಹೆಚ್ಚು ವಾಹನಗಳು ಸುಟ್ಟುಕರಕಲಾಗಿವೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರಾದರೂ, ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ ಎಂದು ಹೇಳಲಾಗುತ್ತಿದೆ.