ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದಿದೆ. ಇದೇ ವೇಳೆ ಈಶಾನ್ಯ ಭಾರತದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಹ ಮತದಾನ ನಡೆದಿದೆ.
ಇಂದು ದೇಶದ 21 ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮತದಾನ ನಡೆದಿದೆ.
ಇದೇ ರೀತಿ ಇಂದು ಶುಕ್ರವಾರ ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಸಹ ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ.
ಹೀಗೆ ಒಟ್ಟು 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಗೆ ಮತದಾನ ಮುಕ್ತಾಯವಾಗಿದೆ.
ಇಂದು ಶುಕ್ರವಾರ ಸಂಜೆ 5 ಗಂಟೆಗೆ ಸಿಕ್ಕ ಮಾಹಿತಿ ಪ್ರಕಾರ ದೇಶದ 102 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ ಶೇಕಡಾ 59.7 ರಷ್ಟು ಮತದಾನ ನಡೆದಿದೆ.