ಬೆಂಗಳೂರು: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಆತಂಕಗೊAಡ ಘಟನೆ ನಡೆದಿದ್ದು, ಕೊನೆಗೂ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ.
ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ವೇಳೆ ಪ್ರಯಾಣಿಕರು ಗಾಬರಿಗೊಂಡು ಕಣ್ಣೀರು ಹಾಕಲು ಆರಂಭಿಸಿದರು. ವಿಮಾನ ಲ್ಯಾಂಡ್ ಮಾಡಲು ಸಾಧ್ಯವಾಗದೆ, ಫೈಲೆಟ್ ಹಾವೇರಿ, ದಾವಣಗೆರೆಯ ಭಾಗದಲ್ಲಿ ವಿಮಾನ ಸುತ್ತಾಟ ನಡೆಸಿತು.
ಸತತ ನಾಲ್ಕು ಗಂಟೆಗಳ ಕಾಲ ಪ್ರಯತ್ನ ನಡೆಸಿದ ಫೈಲೆಟ್ ಕೊನೆಗೆ ಬೆಂಗಳೂರು ಕಡೆಗೆ ಮುಖ ಮಾಡಿದ್ದು, ಅಂತಿಮವಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.

