ರಾಜಕೀಯ ಸುದ್ದಿ

ಮೋದಿ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ರಚನೆ: ಬಸವರಾಜ ಬೊಮ್ಮಾಯಿ

Share It

ಹಾವೇರಿ: ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಗದಗ‌ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ ನಂತರ ಮಾತನಾಡಿದ ಅವರು, ಮುನ್ನಡೆ ನೋಡಿದಾಗ ನಿರೀಕ್ಷೆಗಿಂತ ಕಡಿಮೆಯಾಗಿದೆ. ಉತ್ತರ ಪ್ರದೇಶ ಮಹಾರಾಷ್ಟ್ರದಲ್ಲಿ ನಿರೀಕ್ಷತ ಮಟ್ಟಕ್ಕಿಂತ ಕಡಿಮೆ ಇದೆ. ಎನ್ ಡಿಎ ಗೆ ಹೆಚ್ಚು ಸ್ಥಾನ ಸಿಗಲಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.

ಕೆಲ ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಬಂದಿದ್ದನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆಗೆ ಸ್ಥಳೀಯ ಕಾರಣ ಇರುತ್ತವೆ. ಅವುಗಳ ವಿಶ್ಲೇಷಣೆ ಮಾಡುತ್ತೇವೆ. ಕೊರತೆ ಸರಿಪಡಿಸಿ ಮೋದಿ ನೇತೃತ್ವದಲ್ಲಿ ದೇಶ ಮುನ್ನಡೆಸುತ್ತೇವೆ ಎಂದರು.

ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದಲ್ಲೂ ಹಿನ್ನೆಡೆಯಾಗಿದೆ. ಬರುವ ದಿನದಲ್ಲಿ ವಿಶ್ಲೇಷಣೆ ಮಾಡುತ್ತೇವೆ. ಕರ್ನಾಟದಲ್ಲಿ ಇನ್ನೂ 4 ರಿಂದ 5 ಸ್ಥಾನ ಬರಬೇಕಿತ್ತು. ಆದರೆ, ಅಲ್ಪ ಪ್ರಮಾಣದಲ್ಲಿ ಮೂರು ನಾಲ್ಕು ಸ್ಥಾನ ಕಳೆದುಕೊಂಡಿದ್ದೇವೆ ಎಂದು ಹೇಳಿದರು.


Share It

You cannot copy content of this page