ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಂಸ ಮೊಯ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಛತ್ತೀಸ್ ಘಡ್ ರಾಜ್ಯದ ಪ್ರವಾಸದಲ್ಲಿರುವ ತಂದೆ ವೀರಪ್ಪ ಮೊಯ್ಲಿ ಅವರು ಮಗಳ ಅಕಾಲಿಕ ಮರಣದ ಸುದ್ದಿ ಕೇಳಿ ದಿಢೀರ್ ಬೆಂಗಳೂರಿನ ಕಡೆ ಧಾವಿಸಿದ್ದಾರೆ.
ನಾಳೆ ಬೆಳಗ್ಗೆ ಹಂಸ ಮೊಯ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.