ಮಾಜಿ ಸಚಿವ ನಾಗೇಂದ್ರಗೆ ಬಂಧನದ ಭೀತಿ: ನಾಳೆ ಜಾಮೀನು ಭವಿಷ್ಯ
ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರ ನಿರೀಕ್ಷಣಾ ಜಾಮೀನು ಅರ್ಜಿಂiÀ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ.
ಇಡಿ ವಿಚಾರಣೆಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ನಾಗೇಂದ್ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರಿಗೆ ಬಂಧನದ ಭೀತಿ ಎದುರಾಗಿದೆ.


