ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೆಚ್ಚಿನ ಕಡೆ ಈ ಬಾರಿಯ ಮುಂಗಾರು ಮಳೆ ಬಿದ್ದ ನಂತರ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಆದರೆ ಹೊಳಲ್ಕೆರೆ ತಾಲ್ಲೂಕಿನ ಬಹುತೇಕ ಕಡೆ ಮೆಕ್ಕೆಜೋಳ ಬೆಳೆಗೆ ಲದ್ದಿಹುಳು ಕಾಟ ಹೆಚ್ಚಾಗಿದೆ.
ಈ ಬಗ್ಗೆ ಹೊಳಲ್ಕೆರೆ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಟಿ.ಮಂಜುನಾಥ್ ಅವರು ತಾಲ್ಲೂಕಿನ ಚಿಕ್ಕಎಮ್ಮಿಗನೂರು, ಹಿರೇಎಮ್ಮಿಗನೂರು ಸೇರಿದಂತೆ ಹಲವು ಗ್ರಾಮಗಳಿಗೆ ತಜ್ಞರ ತಂಡದೊಂದಿಗೆ ಭೇಟಿ ನೀಡಿ ರೈತರಿಗೆ ಮಾಹಿತಿ ನೀಡಿದರು.
ಬಳಿಕ ಈ ಬಗ್ಗೆ ಅವರು ಪ್ರತಿಕ್ರಿಯಿಸಿ ‘ಈ ಬಾರಿ ತಾಲ್ಲೂಕಿನ ಬಹುತೇಕ ಕಡೆ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಆದರೆ ಮೆಕ್ಕೆಜೋಳ ಬೆಳೆಗೆ ಲದ್ದಿಹುಳು ಕಾಟ ಹೆಚ್ಚಾಗಿದೆ.
ಲದ್ದಿಹುಳು ಬಾಧೆಯಿಂದ ಮೆಕ್ಕೆಜೋಳ ಬೆಳೆ ಹಾಳಾಗುತ್ತದೆ. ಆದ್ದರಿಂದ ರೈತರು ಮೆಕ್ಕೆಜೋಳಕ್ಕೆ ಕಾಟ ಕೊಡುವ ಲದ್ದಿಹುಳು ನಿಯಂತ್ರಣಕ್ಕೆ ಸಮರ್ಪಕ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
