ಅಪರಾಧ ಸುದ್ದಿ

ನಾಲ್ಕು ಕೊಲೆ, ಎಂಟು ಆರೋಪಿಗಳು:ಮನೆ ಮಗನದ್ದೇ ಸುಫಾರಿ

Share It


ಗದಗ: ಇದೊಂದು ಸಿನಿಮಾ ಸ್ಟೋರಿಯಂತಹ ರೋಚಕ ಘಟನೆ, ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗದಗದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಎಂಟು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಅಷ್ಟಕ್ಕೂ ಈ ಎಂಟು ಆರೋಪಿಗಳು ಕೊಲೆ ಮಾಡಿದ್ದು, ಮತ್ಯಾವುದೋ ಕಾರಣಕ್ಕಾಗಿ ಅಲ್ಲ, ಮನೆಯ ಮಗನೇ ಕೊಟ್ಟ ಸುಫಾರಿ ಡೀಲ್ ಆಸೆಗೆ ಎಂಟು ಆರೋಪಿಗಳು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ನಗರಸಭೆ ಉಪಾಧ್ಯಕ್ಷೆಯ ಒಬ್ಬ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಲಾಗಿತ್ತು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾತರ್ಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಅವರನ್ನು ಏ.19 ರಂದು ಬೆಳಗಿನ ಜಾವ ಕೊಲೆ ಮಾಡಲಾಗಿತ್ತು.

ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರು. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳು ಹತ್ಯೆಗೀಡಾಗಿದ್ದರು. ಮೃತರಲ್ಲಿ ಮೂವರು ಕೊಪ್ಪಳ ಮೂಲದವರಾಗಿದ್ದರು. ನಿಶ್ಚಿತಾರ್ಥ ಕಾರ್ಯಕ್ಕೆ ಕೊಪ್ಪಳದಿಂದ ಆಗಮಿಸಿದ್ದರು. ದುಷ್ಕಮರ್ಿಗಳು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸುಳಿವಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ಆಸ್ತಿ ಮಾರಾಟ ವಿಚಾರವಾಗಿ ಕಲಹ ಉಂಟಾಗಿ ಮನೆಯ ಮಗನೇ ಕೊಲೆಗೆ ಸುಪಾರಿ ನೀಡಿರುವುದುಗೊತ್ತಾಗಿದೆ.

ಪ್ರಕರಣದಲ್ಲಿ ಪ್ರಕಾಶ್ ಬಾಕಳೆ ಪುತ್ರ ವಿನಾಯಕ್ ಬಾಕಳೆ (31) ಪ್ರಮುಖ ಆರೋಪಿಯಾಗಿದ್ದು, ಕೊಲೆಗೆ ಸುಪಾರಿ ನೀಡಿದ್ದ. ಇನ್ನುಳಿದಂತೆ, ಗದಗ ನಗರದ ಫೈರೋಜ್ ಖಾಜಿ (29), ಗದಗನ ಜಿಶಾನ್ ಖಾಜಿ (24), ಮೀರಜ್?ನ ಸಾಹಿಲ್ ಖಾಜಿ (19), ಸೋಹೆಲ್ ಖಾಜಿ (19), ಮೀರಜ್ ಮೂಲದ ಸುಲ್ತಾನ್ ಶೇಖ್ (23), ಮಹೇಶ್ ಸಾಳೋಂಕೆ (21) ಹಾಗೂ ವಾಹಿದ್ ಬೇಪಾರಿ (21) ಎಂಬುವರನ್ನು ಬಂಧಿಸಲಾಗಿದೆ. ಆಸ್ತಿ ವಿಚಾರವಾಗಿ ಮನೆಯಲ್ಲಿ ಕಲಹ ಮಾಡಿಕೊಂಡಿದ್ದ ವಿನಾಯಕ್ ಬಾಕಳೆಯು ಆರೋಪಿ ಫೈರೋಜ್ ಖಾಜಿಗೆ 65 ಲಕ್ಷ ರೂಪಾಯಿಗೆ ಸುಪಾರಿ ಡೀಲ್ ಕೊಟ್ಟಿದ್ದ. ಮುಂಗಡವಾಗಿ ಎರಡು ಲಕ್ಷ ರೂಪಾಯಿ ನೀಡಿದ್ದ.

ಇತ್ತೀಚೆಗೆ ತಂದೆ ಪ್ರಕಾಶ್ ಬಾಕಳೆ ಹಾಗೂ ಪುತ್ರನ ನಡುವೆ ವ್ಯವಹಾರಿಕವಾಗಿ ವೈಮನಸ್ಸು ಉಂಟಾಗಿತ್ತು. ಅಲ್ಲದೆ, ಮತ್ತೊಬ್ಬ ಮಗನ ಹೆಸರಲ್ಲಿ ಪ್ರಕಾಶ್ ಆಸ್ತಿ ಮಾಡಿದ್ದರು. ಈ ನಡುವೆ ಕಳೆದ ಕೆಲ ತಿಂಗಳ ಹಿಂದೆ ಪ್ರಕಾಶ್ ಗಮನಕ್ಕೆ ತಾರದೆ ಕೆಲ ಆಸ್ತಿಯನ್ನು ವಿನಾಯಕ್ ಮಾರಾಟ ಮಾಡಿದ್ದ. ಈ ಹಿನ್ನೆಲೆಯಲ್ಲಿ ವಿನಾಯಕ್ ವರ್ತನೆಗೆ ಬೇಸತ್ತು ಪ್ರಕಾಶ್ ಬಾಕಳೆ ಜಗಳವಾಡಿದ್ದ. ಆಸ್ತಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಕಾಶ್, ಹೆಂಡತಿ ಸುನಂದಾ, ಪುತ್ರ ಕಾತರ್ಿಕ್ನನ್ನ ಹತ್ಯೆ ಮಾಡಲು ವಿನಾಯಕ್ ಪ್ಲಾನ್ ಮಾಡಿದ್ದ ಎಂದು ಐಜಿಪಿ ಮಾಹಿತಿ ನೀಡಿದ್ದಾರೆ.


Share It

You cannot copy content of this page