ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ

Share It

ಉಚಿತ ಪ್ರಯಾಣಕ್ಕೆ ಕಾನೂನು‌ ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆ

ಅರಸೀಕೆರೆ: ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದರು.

ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯತೆ ಅರ್ಪಿಸಿ ಆಶೀರ್ವಾದ ಪಡೆದಕೊಂಡರು.


Share It

You cannot copy content of this page