ಸುದ್ದಿ

ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಕ್ಕೆ ‘ಡಿಮ್ಯಾಂಡ್’

Share It

ಬೆಂಗಳೂರು: 2025-26 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮುಸ್ಲಿಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ.

ಇಲಾಖೆ ಅಡಿಯಲ್ಲಿ 134 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು ಪ್ರಸಕ್ತ ಸಾಲಿನಲ್ಲಿ ದಾಖಲಾತಿಗೆ 11,330 ಸೀಟುಗಳು ಲಭ್ಯವಿರುತ್ತದೆ. ಆಶ್ಚರ್ಯವೇನೆಂದರೆ, 11330 ಸೀಟುಗಳಿಗೆ ಬರೋಬ್ಬರಿ 56424 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದಾರೆ.
ಭಾನುವಾರ ರಾಜ್ಯಾಧ್ಯಂತ 145 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದ್ದು, 41 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ರಾಜ್ಯದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಇದರಿಂದಾಗಿ ಎಲ್ಲಾ ಪೋಷಕರು ಈ ಶಾಲೆಗಳಲ್ಲಿ ಸೇರಿಸಲು ಮುಂದಾಗಿದ್ದಾರೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದಡಿಯಲ್ಲಿ ಜಿಲ್ಲೆ ಗೊಂದರಂತೆ ಸಿಬಿಎಸ್ಸಿ ಪಠ್ಯಕ್ರಮವನ್ನು ಅಳವಡಿಸಿ ಜಿಲ್ಲೆಗೆ ಒಂದರಂತೆ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಸಿ ಬಿ ಎಸ್ ಸಿ ಪಠ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ.

ಪ್ರವೇಶ ಪ್ರಕ್ರಿಯೆ ಮುಕ್ತ ಮತ್ತು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ಸಂಪೂರ್ಣ ಆನ್ಲೈನ್ ನಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಅಲ್ಪಸಂಖ್ಯಾತ ರ ನಿರ್ದೇಶನಲಯ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದ್ದಾರೆ.


Share It

You cannot copy content of this page