ಬೆಂಗಳೂರು: ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಏಪ್ರಿಲ್ ನಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಹೀಗಾಗಿ, ಕಳೆದ ಏಳು ವರ್ಷಗಳಿಂದ ನಡೆಯದಿರುವ ಬೆಂಗಳೂರು ಮಹಾನಗರದ ಚುನಾವಣೆ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇದೀಗ ಕಾಲ ಕೂಡಿಬಂದಿದೆ ಎನ್ನಲಾಗುತ್ತಿದೆ.
ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳು ಪೂರ್ಣಗೊಳ್ಳಲಿವೆ. ಪರೀಕ್ಷೆಗಳು ಪೂರ್ಣಗೊಳ್ಳುತ್ತಿದ್ದಂತೆ ಚುನಾವಣೆಗಳನ್ನು ನಡೆಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ಚುನಾವಣಾ ಆಯೋಗದ ಸೂಚನೆಯ ಅನುಸಾರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿವೆ. ಇದಕ್ಕೆ ಅಗತ್ಯವಾದ ಕ್ರಮಗಳನ್ನು ಈಗಾಗಲೇ ಸರಕಾರ ಮತ್ತು ಚುನಾವಣಾ ಆಯೋಗ ಕೈಗೊಳ್ಳುತ್ತಿದೆ. ಹೀಗಾಗಿ, ಕಳೆದ ೧೧ ವರ್ಷಗಳಿಂದ ಚುನಾವಣೆ ನಡೆಯದಿದ್ದ ಬೆಂಗಳೂರು ಚುನಾವಣಾ ಕಣ ರಂಗೇರಿದೆ.

