ಕ್ರೀಡೆ ಸುದ್ದಿ

ಜಿಂಬಾಬ್ವೆ ವಿರುದ್ಧದ ಟಿ-20 ಸರಣಿಗೆ ಗಿಲ್ ನಾಯಕ: ರೋಹಿತ್-ಕೊಹ್ಲಿಗೆ ವಿಶ್ರಾಂತಿ

Share It

ಬೆಂಗಳೂರು: ಜುಲೈ 6ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ-20 ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.

ಸೋಮವಾರ ನಡೆದ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಜುಲೈ 6ರಿಂದ 14ರವರೆಗೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಟಿ-20 ಸರಣಿಯಿಂದ ಪ್ರಮುಖ ಆಟಗಾರರಾದ ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಶುಭಮನ್ ಗಿಲ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಶುಭಮನ್ ಗಿಲ್ ಗೆ ನಾಯಕತ್ವ ವಹಿಸಲಾಗಿದೆ. ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಮೊದಲ ಬಾರಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ:

ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮ, ರಿಂಕು ಸಿಂಗ್, ಸಂಜು ಸ್ಯಾಮ್ಸನ್, ಧ್ರುವ ಜುರೆಲ್, ನಿತಿಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಶ್ನೋಯಿ, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.


Share It

You cannot copy content of this page