ಸುದ್ದಿ

ಕಾಲು ಕಳೆದುಕೊಂಡರು ಆಂಬುಲೆನ್ಸ್ ಮೂಲಕ ಪರೀಕ್ಷೆಗೆ ಹಾಜರಾಗಿದ್ದ ಬಾಲಕಿ :ಮಾಜಿ ಸಚಿವ ಸುರೇಶ್‌ಕುಮಾರ್‌ ಅವರಿಂದ ಆರ್ಥಿಕ ನೆರವು

Share It

ಜಿಲ್ಲೆಯ ಕೆಜಿಎಫ್ (ಕೋಲಾರ) ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಇತ್ತೀಚಿಗೆ ನೆಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿತ್ತು. ಈ ಮೂಲಕ ಮನಸ್ಥೈರ್ಯ ಇದ್ದರೆ ಯಾವುದೂ ಅಸಾಧ್ಯವಲ್ಲವೆಂದು ಬಾಲಕಿ ತೋರಿಸಿಕೊಟ್ಟಿದ್ದಳು. ಆದರೆ ಈಗ ಅದೇ ಬಾಲಕಿಯ ಚಿಕಿತ್ಸೆಗೆ ಆಕೆಯ ತಂದೆ ಹರಸಾಹಸ ಪಡುತ್ತಿರುವುದನ್ನು ತಿಳಿದ ಮಾಜಿ ಸಚಿವ ಸುರೇಶ್ ಕುಮಾರ್, ಬಾಲಕಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.

ಕೆಜಿಎಫ್ ತಾಲ್ಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ ಸೆಂಟ್ ಮೆರಿಸ್ ಹೈಸ್ಕೂಲ್ ವಿದ್ಯಾರ್ಥಿನಿ 16 ವರ್ಷದ ಕುಸುಮಾ, ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಳು. ನಂತರ ಆಕೆಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಯಿತು.ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಂಡ ಕುಸುಮಾ, ತನ್ನ ತಾಯಿಯ ಮೂಲಕ ಆ್ಯಂಬುಲೆನ್ಸ್ ಜೊತೆಗೆ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ತಿಳಿಸಿತ್ತು. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದರು.


Share It

You cannot copy content of this page