ಉಪಯುಕ್ತ ಸುದ್ದಿ

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಗುಡ್ ನ್ಯೂಸ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share It

ಮೈಸೂರು: ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಸೆನೆಟ್ ಭವನದಲ್ಲಿ ಆಯೋಜಿಸಲಾಗಿದ್ದ ನೂತನ ವಿಧಾನ ಪರಿಷತ್ ಸದಸ್ಯರಾದ ಡಾ .ಕೆ ಶಿವಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ನೌಕರರ ಪಿಂಚಣಿ ನೀಡಲು ಅನುದಾನ ಬಿಡುಗಡೆ ಮಾಡಲಾಗಿದೆ. ಮೈಸೂರು ವಿವಿ ಸರಿಪಡಿಸಲು ವಿಶೇಷ ಗಮನ ಹರಿಸಿ, ಕ್ರಮ ವಹಿಸಲಾಗುವುದು ಎಂದರು.

ವೈಚಾರಿಕ, ವೈಜ್ಞಾನಿಕ ಶಿಕ್ಷಣ ಸಿಗದೇ ಹೋದರೆ ಸಮಾಜವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಮಾಜದಲ್ಲಿರುವ ಕಂದಾಚಾರ ಹಾಗೂ ಮೌಢ್ಯಗಳಿಗೆ ದಾಸರಾಗುತ್ತೇವೆ. ಶತಶತಮಾನಗಳಿಂದ ಅಸ್ಪೃಶ್ಯತೆ ಹಾಗೂ ಜಾತಿಯ ಕಾರಣಗಳಿಂದ ಗುಲಾಮಗಿರಿಯ ಮನಸ್ಥಿತಿ ನಮ್ಮಲ್ಲಿ ಮನೆ ಮಾಡಿದೆ, ಇದನ್ನು ಕಿತ್ತೊಗೆಯಬೇಕು ಎಂದು ಹೇಳಿದರು.

ದಲಿತರು ಪತ್ರಕರ್ತರಾಗುವುದು ಬಹಳ ಅಪರೂಪ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿಯವರು ಪತ್ರಕರ್ತರಾಗಿದ್ದರು. ಎಲ್ಲರೂ ಅವರಂತಾಗಲು ಸಾಧ್ಯವಿಲ್ಲ. ಆದರೆ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಅದನ್ನು ಶಿವಕುಮಾರ್ ಅವರು ಮಾಡಿಕೊಂಡು ಬಂದಿದ್ದಾರೆ. ಸಾಮಾಜಿಕ ವ್ಯವಸ್ಥೆಗಳ ಬಗ್ಗೆ ಚಿಂತಿಸಿ ಪರಿಹಾರಗಳನ್ನು ಹುಡುಕುವ ಕೆಲಸವನ್ನು ಪತ್ರಕರ್ತರಾಗಿ ಶಿವಕುಮಾರ್ ಸದಾ ಮಾಡಿದ್ದಾರೆ ಎಂದರು.


Share It

You cannot copy content of this page