ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ತನ್ನ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ತುಟ್ಟಿಭತ್ಯೆಯ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ನೌಕರರ ತುಟ್ಟಿಭತ್ಯೆ ಶೇ.1.50ರಷ್ಟು ಹೆಚ್ಚಿಸಿದೆ. ಈ ಮೂಲಕ ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಏರಿಕೆಯಾಗಿದೆ. ದಿನಾಂಕ 1.1.2025 ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಆರ್ಥಿಕ ಇಲಾಖೆ ಉನ್ನತ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.