ಉಪಯುಕ್ತ ಸುದ್ದಿ

ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್: ಸಿವಿಲ್ ಪರೀಕ್ಷೆಗೆ 5 ವರ್ಷ ವಯೋಮಿತಿ ಸಡಿಲಿಕೆ

Share It

ಬೆಂಗಳೂರು: ಉದ್ಯೋಗಾಂಕ್ಷಿಗಳಿಗೆ ಕರ್ನಾಟಕ ಸರಕಾರ ಗುಡ್‌ನ್ಯೂಸ್ ನೀಡಿದ್ದು, ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕದಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ನಿರ್ಧಾರದಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಇನ್ಮುಂದೆ 40 ವರ್ಷದವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹಿಂದೆ 35 ವರ್ಷಗಳ ವಯೋಮಿತಿಯನ್ನು ಮಾತ್ರವೇ ನಿಗದಿ ಮಾಡಲಾಗಿತ್ತು. ಇನ್ನೂ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಇನ್ಮುಂದೆ 43 ವರ್ಷಗಳ ವರೆಗೆ ಸಿವಿಲ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಮಹತ್ವದ ನಿರ್ಧಾರವನ್ನು ಡಿ.31, 2027 ರವರೆಗೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದು ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾದಿದ್ದು, ವಯೋಮಿತಿ ಮೀರಿದ್ದ ಅಭ್ಯರ್ಥಿಗಳಿಗೆ ಅತ್ಯಂತ ಅನುಕೂಲವಾಗಲಿದೆ.


Share It

You cannot copy content of this page