ಅನಧಿಕೃತ ಬಡಾವಣೆಗಳ ನಿವೇಶನದಾರರಿಗೆ ಗುಡ್ ನ್ಯೂಸ್: ಎ -ಖಾತಾ ನೀಡಲು ಸಚಿವ ಸಂಪುಟದ ಒಪ್ಪಿಗೆ !
ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿರುವ ನಿವೇಶನಗಳಿಗೆ ಷರತ್ತುಬದ್ಧ ಎ-ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸಿರುವ ಅಥವಾ ಮಾರಾಟ ಮಾಡುವ ಪ್ರಕ್ರಿಯೆ ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ – ಖಾತಾ ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್‌ಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವ ಷರತ್ತಿಗೆ ಒಳಪಟ್ಟು ಎ – ಖಾತಾ ನೀಡಲು ತೀರ್ಮಾನಿಸಲಾಗಿದೆ.

