ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, ಚಿನ್ನಸ್ವಾಮಿ ಅಂಗಳದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ.
ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಐಪಿಎಲ್ ನಡೆಸುವ ಸಂಬಂಧ ಚರ್ಚೆ ನಡೆದಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಸಚಿವ ಸಂಪುಟ ಸಭೆಗೆ ಮುನ್ನ ನಡೆದ ಸಭೆಯಲ್ಲಿ ಗೃಹಸಚಿವರು ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿದ್ದರು.
ಚರ್ಚೆಯ ನಂತರ ಸಚಿವ ಸಂಪುಟ ಸಭೆಯ ಮುಂದಿಡಲಾಗಿತ್ತು. ಸಚಿವ ಸಂಪುಟ ಸಭೆಯಲ್ಲಿ ಕೆಎಸ್ಸಿಎ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು, ರಕ್ಷಣಾ ವ್ಯವಸ್ಥೆಗಳನ್ನೆಲ್ಲ ಪರಿಶೀಲಿಸಿ ಅನುಮತಿ ನೀಡಲು ಒಪ್ಪಿಗೆ ಸೂಚಿಸಲಾಯಿತು.

