ಆರೋಗ್ಯ ರಾಜಕೀಯ ಸುದ್ದಿ

ಉತ್ತರ ಕನ್ನಡ ಜಿಲ್ಲೆಗೆ ಗುಡ್ ನ್ಯೂಸ್ : ಕಾರವಾರಕ್ಕೆ ಬರಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಜಟ್ ನಲ್ಲಿ ಅಧಿಕೃತ ಘೋಷಣೆ

Share It

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಜೆಟ್ ನಲ್ಲಿ ರಾಜ್ಯ ಸರಕಾರ ಅಧಿಕೃತವಾಗಿ ಘೋಷಣೆ ಮಾಡಲಿದೆ.

ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ ಕೋಲಾರ, ಪುತ್ತೂರು, ಬಿಜಾಪುರಗಳಲ್ಲೂ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


Share It

You cannot copy content of this page