ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಕ್ಷಗಳ ವಿರೋಧದ ನಡುವೆ ರಾಜ್ಯಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು.
ಆದ್ರೆ, ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಅಲ್ಲದೇ ರಾಜಭವನ ಮತ್ತು ರಾಜ್ಯಸರ್ಕಾರದ ನಡುವಿನ ಸಂಘರ್ಷದ ಮತ್ತೊಂದು ಅಧ್ಯಾಯ ಆರಂಭವಾದಂತಾಗಿದೆ.
ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಜಾರಿಗೆ ಮುಂದಾಗಿತ್ತು. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ, ವಿಧಾನಪರಿಷತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಸದ್ಯ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಿಸಿ ಬಿಲ್ ವಾಪಸ್ ಕಳುಹಿಸಿದ್ದಾರೆ.
ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆ ಹಾಗೂ ವಿಧಾನಪತಿಷತ್ನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪಾಸ್ ಮಾಡಿಕೊಂಡು ರಾಜ್ಯಪಾಲರಿಗೆ ಅಂಕಿತಕ್ಕೆ ಕಳುಹಿಸಿಲಾಗಿತ್ತು. ಮತ್ತೊಂದೆಡೆ ಯಾವುದೇ ಕಾರಣಕ್ಕೂ ಗ್ರೇಟರ್ ಬೆಂಗಳೂರು ಬಿಲ್ಗೆ ಒಪ್ಪಿಗೆ ನೀಡಬೇಡಿ ಎಂದು ಬಿಜೆಪಿ ಹಾಗೂ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಗ್ರೇಟರ್ ಬೆಂಗಳೂರು ಮಸೂದೆ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ರಾಜ್ಯಸರ್ಕಾರಕ್ಕೆ ಹಿನ್ನಡೆಯಾಗಿದ್ದು, ವಿಪಕ್ಷಗಳು ಮೇಲುಗೈ ಸಾಧಿಸಿವೆ.
ಬೆಂಗಳೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದು. ಈ ಅಭಿವೃದ್ಧಿಗೆ ಅನುಗುಣವಾಗಿ ಬೆಂಗಳೂರಿನ ಆಡಳಿತವನ್ನು ವಿಕೇಂದ್ರೀಕರಣ ಮಾಡಬೇಕು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಣೆ ಮಾಡಬೇಕೆಂಬ ವಿಚಾರವು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಲ್ಲೇ ಇದೆ. ಇದೀಗ ಬೆಂಗಳೂರನ್ನು 7 ಭಾಗಗಳನ್ನಾಗಿ ಅಥವಾ ಇರುವ ಒಂದು ಮಹಾನಗರ ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ರಾಜ್ಯಸರ್ಕಾರ ಮುಂದಾಗಿತ್ತು.
ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲು ಮುಂದಾಗಿದ್ದು, ಬೆಂಗಳೂರಿಗೆ 3 ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.
ಇನ್ನು ಗ್ರೇಟರ್ ಬೆಂಗಳೂರು ಸಮಿತಿಯು ಮಂಡನೆ ಮಾಡಿರುವ ವರದಿಯಲ್ಲಿ 7 ಪಾಲಿಕೆಗಳನ್ನು ರಚನೆ ಮಾಡುವ ಶಿಫಾರಸ್ಸು ಮಾಡಲಾಗಿದೆ. ಅಲ್ಲದೆ ಈ ರೀತಿ ಪಾಲಿಕೆಗಳನ್ನು ರಚನೆ ಮಾಡುವ ಸಂದರ್ಭದಲ್ಲಿ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ. ಅದರಲ್ಲಿ ಮುಖ್ಯವಾಗಿ 7 ಪಾಲಿಕೆಗಳಿಗೆ ಪ್ರತಿ ಪಾಲಿಕೆಗೂ 100ರಿಂದ 125 ವಾರ್ಡ್‌ಗಳನ್ನು ರಚನೆ ಮಾಡಬೇಕೆನ್ನುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ, ಇದೀಗ ಗ್ರೇಟರ್ ಬೆಂಗಳೂರು ಬಿಲ್ಗೆ ಅಂಕಿತ ಹಾಕದೇ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.