ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: ಏಳು ಭಾಗವಾಗಲಿದೆ ಬಿಬಿಎಂಪಿ
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇನ್ನು ಮುಂದೆ ಬಿಬಿಎಂಪಿ ಏಳು ವಿಭಾಗವಾಗಿ ಕಾರ್ಯನಿರ್ವಹಿಸಲಿದೆ.
ರಾಜ್ಯ ಸರಕಾರ ಗ್ರೇಟರ್ ಬೆಂಗಳೂರು ವಿಧೇಯಕ ರಚನೆ ಮಾಡಿ, ಅನಂತರ ಚುನಾವಣೆ ನಡೆಸುವ ಸಂಬAಧ ತೀರ್ಮಾನ ತೆಗೆದುಕೊಂಡಿತ್ತು. ಈ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅನುಮೋದನೆ ಕಳುಹಿಸಿಕೊಡಲಾಗಿತ್ತು.
ಇದೀಗ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಇನ್ನು ಮುಂದೆ ಏಳು ಭಾಗವಾಗಿ ಬಿಬಿಎಂಪಿ ಕಾರ್ಯನಿರ್ವಹಿಸಲಿದೆ. ಗ್ರೇಟರ್ ಬೆಂಗಳೂರು ವಿಧೇಯಕದ ಅಡಿಯಲ್ಲಿ ಮುಂದಿನ ಚುನಾವಣೆ ನಡೆಯಲಿದೆ.


