ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಆರೋಪ ಕಾಎಳಿಬಂದಿರುವ ಮೂಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತ್ರತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗ ಆರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಬೃಹತ್ ಪ್ರತಿಭಟನೆ ಮೂಲಕ ಸರಕಾರ ಹಣಿಯಲು ಸಜ್ಜಾಗಿದ್ದ ಬಿಜೆಪಿ, ನಾಳೆಯಿಂದ ವಿಧಾನಸಭಾ ಅಧಿವೇಶನದಲ್ಲಿ ಸರಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿತ್ತು. ಇದೀಗ ತನಿಖೆಗೆ ಆದೇಶಿಸುವ ಮೂಲಕ ಸರಕಾರ ಸಮರ್ಥನೆಗೆ ಸಜ್ಜಾಗಿದೆ.
