ರಾಜಕೀಯ ಸುದ್ದಿ

ಕರ್ನಾಟಕ ಪಬ್ಲಿಕ್ ಶಾಲೆಯ ಪಿಯು ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ವಿಸ್ತರಣೆಗೆ ಸರಕಾರ ಚಿಂತನೆ

Share It

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್​ ಶಾಲೆ(ಕೆಪಿಎಸ್‌)ಗಳ ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂಬರುವ ಬಜೆಟ್ ನಲ್ಲಿ ಘೋಷಣೆ ಮಾಡಲಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಾರ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಯೋಜನೆ ಜಾರಿಗೆ ಬರಲಿದೆ. ಮುಂಬರುವ ರಾಜ್ಯ ಬಜೆಟ್‌ನಲ್ಲಿ ಈ ಬಗ್ಗೆ ಔಪಚಾರಿಕ ಘೋಷಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಈಗಾಗಲೇ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ನೀಡಲಾಗುತ್ತಿದೆ. ಆರ್ಥಿಕ ದುರ್ಬಲ ವರ್ಗಗಳ ಮಕ್ಕಳ ಹಾಜರಾತಿ ಸುಧಾರಿಸುವ ಹಾಗೂ ಶಾಲೆ ಬಿಡುವುದನ್ನು ಕಡಿಮೆ ಮಾಡಲು ಈ ಯೋಜನೆ ವಿಸ್ತರಣೆ ಮಾಡಲಾಗಿದೆ.

ಇತ್ತೀಚಿನ ಸರ್ಕಾರದ ನಿರ್ಧಾರದಂತೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ಗಳಲ್ಲಿ ಓದುತ್ತಿರುವ ಪಿಯು ವಿದ್ಯಾರ್ಥಿಗಳೂ ಸಹ ಮುಂದಿನ ಶೈಕ್ಷಣಿಕ ವರ್ಷದಿಂದ ಮಧ್ಯಾಹ್ನದ ಊಟ ಪಡೆಯಲಿದ್ದಾರೆ.  ಸಿಎಂ ಜತೆ ಚರ್ಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ”ಎಂದು ತಿಳಿಸಿದರು.

“ಫಲಾನುಭವಿಗಳ ಸಂಖ್ಯೆ ಹಾಗೂ ಅದರ ಹಣಕಾಸಿನ ಪರಿಣಾಮದ ಕುರಿತು ನನ್ನ ಮಟ್ಟದಲ್ಲಿ ಅಂಕಿ ಅಂಶಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮಾರ್ಚ್ ಮೊದಲ ವಾರದಲ್ಲಿ ತಾತ್ಕಾಲಿಕವಾಗಿ ನಿಗದಿಪಡಿಸಲಾದ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದರು.


Share It

You cannot copy content of this page