ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ: ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾ ಮೇಲ್ದಂಡೆ ಯೋಜನೆಯನ್ನು ಫೂರ್ಣಗೊಳಿಸಲು ತಮ್ಮ ಸರಕಾರ ಬದ್ಧವಾಗಿದೆ ಮತ್ತು ಸರ್ಕಾರದ ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸುವುದು ಶತಸಿದ್ಧ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಅನುದಾನ ನಿರೀಕ್ಷಿಸಲಾಗಿತ್ತು, ಅದರೆ ಅದು ಬಿಡುಗಡೆಯಾಗದ ಕಾರಣ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ತಾವು ಭದ್ರಾ ಮೇಲ್ದಂಡೆ ಯೋಜನೆಗೆ 1,500 ಕೋಟಿ ರೂ. ತೆಗೆದಿರಿಸಿರುವುದಾಗಿ ಸಿದ್ದಾರಾಮಯ್ಯ ಹೇಳಿದರು.
ಯೋಜನೆಯ ಬಗ್ಗೆ ವಿವರವಾಗಿ ಮಾತಾಡಿದ ಅವರು ಅದು ಒಮ್ಮೆ ಪೂರ್ಣಗೊಂಡರೆ 5.5 ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಕರ್ಯ ಲಭ್ಯವಾಗಲಿದೆ, ಮತ್ತು ಯೋಜನೆಯ ಒಟ್ಟು ವೆಚ್ಚ 21,000 ಕೋಟಿ ರೂ. ಅಂತ ಅಂದಾಜಿಸಲಾಗಿದ್ದು ಇದುವರೆಗೆ 9,000 ಕೋಟಿ ರೂ. ಖರ್ಚು ಮಾಡಲಾಗಿದೆ, ಮುಂಬರುವ ವರ್ಷಗಳಲ್ಲಿ ಉಳಿದ 13,000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಕಂಪ್ಲೀಟ್ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.