ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ

Share It

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಇಂದು ಒಂದೇ ದಿನ ಎರಡೆರಡು ಶಾಕ್ ನೀಡಿದ್ದು, ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್‌ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (KERC) ಇಂದು ಆದೇಶ ಹೊರಡಿಸಿದೆ.

ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಲಾಗಿದೆ. ಈ ವಿದ್ಯುತ್ ದರ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್‌ಸಿ ತಿಳಿಸಿದೆ.

ರಾಜ್ಯದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ರಾಜ್ಯಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.


Share It

You May Have Missed

You cannot copy content of this page