ಬೆಂಗಳೂರು: ಈ ಬಾರಿ ಮುಂಗಾರು ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡ ಪ್ರದೇಶಗಳಲ್ಲಿ ದೈನಂದಿನ ಜನಜೀವನ ಅಸ್ತವ್ಯಸ್ತವಾಗಿ ಜನರು ಓಡಾಡಲು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿರುವ ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಇದರಿಂದ ಈ ಮೇಲ್ಕಂಡ ಮೂರೂ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಎಲ್ಲಾ ಪದವಿಪೂರ್ವ ಕಾಲೇಜುಗಳು ಮತ್ತು ಇನ್ನಿತರ ಸರ್ಕಾರಿ, ಅನುದಾನಿತ ಪದವಿ ಕಾಲೇಜುಗಳಿಗೆ ನಾಳೆ ಮಂಗಳವಾರ ಜುಲೈ 16 ರಂದು ರಜೆ ಘೋಷಿಸಲಾಗಿದೆ.
