ಸುದ್ದಿ

ಗ್ರೇಟರ್ ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Share It

ಬೆಂಗಳೂರು: ಬೆಂಗಳೂರಿನ ಬಿಬಿಎಂಪಿಯನ್ನು ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡಲು ರಾಜ್ಯಸರ್ಕಾರ ಮುಂದಾಗಿದೆ. ಆದರೆ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವುದರಿಂದ ಸರ್ಕಾರ ಇಂದು ಸರ್ವಪಕ್ಷ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾದ ಬೆನ್ನಲ್ಲೇ, ಡಿಸಿಎಂ ಡಿ.ಕೆ ಶಿವಕುಮಾರ್ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋ ಕೆಲಸ ಮಾಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ‘ನಾಗರೀಕರ ಧ್ವನಿ, ಅದೇ ಸರ್ಕಾರದ ಧ್ವನಿ’ ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಸರ್ವಪಕ್ಷ ಸಭೆ ಕರೆದಿದ್ದರು. ಇದರಲ್ಲಿ ಬೆಂಗಳೂರಿನ‌ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಭಾಗಿಯಾದರು. ವಿ.ಪಕ್ಷ ನಾಯಕ ಆರ್. ಅಶೋಕ್, ಶಾಸಕ ಎಸ್​​.ಟಿ ಸೋಮಶೇಖರ್ ಕೂಡ ಭಾಗಿಯಾದರು. ಸಭೆಯಲ್ಲಿ ಟ್ರಾಫಿಕ್, ಕುಡಿಯುವ ನೀರು, ಮೆಟ್ರೋ, ರಸ್ತೆ, ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಚರ್ಚೆಯಾಗಿದೆ.

ಸಭೆಯಲ್ಲಿ, ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಗಾಬರಿಯಾಗುವುದು ಬೇಡ. ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂದು ಡಿಸಿಎಂ ಕೋರಿದರು.

ಜೊತೆಗೆ ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸ್ಸು ಮಾಡಿದರೆ ಇಂದೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು ಎಂದು ಡಿಸಿಎಂ ಹೇಳಿದರು.

ಸಭೆಯಲ್ಲಿ ಇನ್ನೂ ಏನೇನು ಚರ್ಚೆಯಾಯಿತು?

ತಂತ್ರಜ್ಞಾನ, ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ. ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದೆ. ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ.
ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು.

ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು.
ಕಸದ ವಿಚಾರ, ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ.
ಕಸ ಹಾಗೂ ಸಂಚಾರಿ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳು ಬಂದಿವೆ.
ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಎಸ್ಟೇಮ್ ಮಾಲ್ ಟು ಸಿಲ್ಕ್ ಬೋರ್ಡ್ ಸುರಂಗ ಮಾರ್ಗ ಮಾಡುವ ಬಗ್ಗೆ ಚರ್ಚೆಯಾಗಿದೆ.
100 ಕಿಮೀ ಸಿಗ್ನಲ್ ಫ್ರೀ ಕಾರಿಡಾರ್ 12 ಕೋಟಿ ರೂ. ವೆಚ್ಚದಲ್ಲಿ ಮಾಡುವ ತೀರ್ಮಾನ.

ಇನ್ನು, ಯಶವಂತಪುರ ಬಿಜೆಪಿ ಶಾಸಕ ಎಸ್​​​.ಟಿ ಸೋಮಶೇಖರ್, ಗ್ರೇಟರ್ ಬೆಂಗಳೂರು ಅಥಾರಿಟಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ.


Share It

You cannot copy content of this page