ಹೊಸಕೋಟೆ: ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಸೂಲಿಬೆಲೆ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಸಮುದಾಯ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನ ಸ್ವಂದನಾ” ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ವಿವಿಧ ಇಲಾಖೆಗಳಿಗೆ ಪ್ರತ್ಯೇಕ ಸ್ಟಾಲ್ ಕಲ್ಪಿಸಿದ್ದು, ಸುಮಾರು 300 ಹೆಚ್ಚು ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತುಗಳನ್ನು ಮತ್ತು ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು. ಸಾರ್ವಜನಿಕರ ಕುಂದು-ಕೊರೆತೆಗಳಿಗೆ ಸ್ಥಳದಲ್ಲೆ ಸೂಕ್ತ ಪರಿಹಾರ ನೀಡಿದ್ದೇವೆ, ಕೆಲವು ಕ್ಲಿಷ್ಟ ಸಮಸ್ಯೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಪರಿಹಾರ ಒದಗಿಸುವ ಬಗ್ಗೆ ಅಧಿಕಾರಿಗಳಿಗೆ ಹೇಳಿದರು.
ಸ್ಥಳದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಶಿವಶಂಕರ್ ಮತ್ತು ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.