ವಿಜಯಪುರ: ನಗರದಲ್ಲಿ ಮತ್ತೇ ಗುಂಡಿನ ಮೊರೆತ ಕೇಳಿಬಂದಿದ್ದು, ಹಾಡುಹಗಲಲ್ಲೇ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಲಾಗಿದ್ದು, ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮುಂಡಗೋಡ ಆಸ್ಪತ್ರೆ ಮುಂಭಾಗದಲ್ಲಿ ಸ್ಕೂಟಿಯಲ್ಲಿ ತೆರಳುಯತ್ತಿದ್ದ ಯಾಸಿನ್ ಠಕ್ಕೆ ಎಂಬಾತನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ರಕ್ತಸ್ರಾವದಿಂದ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆತನ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಡಿಜೆ ವಿಚಾರಕ್ಕೆ ಗಲಾಟೆ ನಡೆದಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆತನ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಯಾಸೀಸ್ ಠಕ್ಕೆ ವಿಜಯಪುರದ ಗ್ಯಾಂಗ್ನ ಬಾವಡಿ ನಿವಾಸಿ ಎಂದು ಗುರುತಿಸಲಾಗಿದೆ.
