ರಾಜಕೀಯ ಸುದ್ದಿ

ರಂಜಾನ್ ಹಬ್ಬಕ್ಕೆ ಅರ್ಧದಿನ ಶಾಲೆಗೆ ರಜೆ: ಹಿಂದೂ ಸಂಘಟನೆಗಳಿಂದ ಆಕ್ಷೇಪ

Share It

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವೊಂದು ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

ಕರ್ನಾಟಕ ಶಿಕ್ಷಣ ಇಲಾಖೆ ಉರ್ದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಂಜಾನ್ ಹಬ್ಬದ ಪ್ರಯುಕ್ತ ಅರ್ಧ ದಿನ ರಜೆ ನೀಡಲು ತೀರ್ಮಾನಿಸಿ, ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಬೆಳಗ್ಗೆ 8 ಗಂಟೆಗೆ ಶಾಲೆಗಳು ಶುರುವಾಗಿ, ಮಧ್ಯಾಹ್ನ 12.45 ಕ್ಕೆ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ.

ಸರಕಾರದ ಈ ಸುತ್ತೋಲೆ ಹಿಂದೂ ಸಂಘಟನೆಗಳನ್ನು ಕೆರಳಿಸಿದ್ದು, ಹಿಂದೂ ಹಬ್ಬಗಳ ಸಂದರ್ಭದಲ್ಲಿ ಇಂತಹದ್ದೇ ತೀರ್ಮಾನ ತೆಗೆದುಕೊಳ್ಳಲು ಸರಕಾರ ಮುಂದಾಗುತ್ತಾ? ತಕ್ಷಣವೇ ಈ ನಿರ್ಧಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿವೆ.


Share It

You cannot copy content of this page