ಸುದ್ದಿ

Hanura Shotout Case: ಸರಕಾರಕ್ಕೆ ತನಿಖಾ ವರದಿ ಸಲ್ಲಿಕೆ

Share It

ಚಾಮರಾಜನಗರ: ಜಿಲ್ಲೆಯ ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಶೂಟೌಟ್ ಪ್ರಕರಣದ ತನಿಖೆಯ ವರದಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಜಿಲ್ಲಾಧಿಕಾರಿ ಶ್ರೀರೂಪಾ ಸಲ್ಲಿಸಿದ್ದಾರೆ.

ಹನೂರು ವಲಯದ ಕರಡಿಕಲ್ಲು ಗುಡ್ಡದಲ್ಲಿ ಆ.15 ರಂದು ಅರಣ್ಯ ಇಲಾಖೆಯ ಶೂಟೌಟ್‌ಗೆ ಮರಿಯಾ ಮಂಗಲದ ಆಂಥೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂಬುವವರು ಮೃತಪಟ್ಟಿದ್ದರು. 

ತಮ್ಮ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದ ಇವರ ಮೇಲೆ ಪ್ರತಿದಾಳಿ ಮಾಡಿದಾಗ ಮೃತಪಟ್ಟರೆಂದು ಅರಣ್ಯ ಇಲಾಖೆ ತಿಳಿಸಿತ್ತು. ಆದರೆ ಮೃತ ಆಂಥೋಣಿಸ್ವಾಮಿ ಪತ್ನಿ ಲೂರ್ಥಾ ಮೇರಿ ಅವರು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಕಾಡಿನಲ್ಲಿ ತಪ್ಪಿಸಿಕೊಂಡಿದ್ದ ಹಸು ಹಿಡಿಯಲು ಹೋಗಿದ್ದವರನ್ನು ಅರಣ್ಯ ಇಲಾಖೆಯವರು ಕೊಂದಿದ್ದಾರೆ ಎಂದು ಆರೋಪಿಸಿದ್ದರು. 

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದರು. ಕೊಳ್ಳೇಗಾಲದ ಉಪವಿಭಾಗಾಧಿಕಾರಿ ದಿನೇಶ್‌ಕುಮಾರ್ ಮೀನಾ ತನಿಖೆ ನಡೆಸಿದ್ದು, ಇನ್ನಷ್ಟೇ ಈ ತನಿಖಾ ವರದಿಯಲ್ಲಿ ಏನಿದೆ ಎಂಬುದು ಬಹಿರಂಗಗೊಳ್ಳಬೇಕಿದೆ.


Share It

You cannot copy content of this page