ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಣ್ಣೇನಹಳ್ಳಿ ಕಡೆಯಿಂದ ಬಂದ ಬೈಕ್ ಸವಾರರು ರಸ್ತೆಗೆ ನುಗ್ಗಿದ್ದಾರೆ ಎನ್ನಲಾಗಿದೆ.
ಈ ವೇಳೆ ನಿಯಂತ್ರಣ ಸಿಗದೆ ಕಾರು ಚಾಲಕ ಬೈಕ್ ಗೆ ಗುದ್ದಿದ್ದು, ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರು ಸುಮಾರು 50 ವರ್ಷ ವಯಸ್ಸಿನವರಾಗಿದ್ದು, ಗುರುತು ಸಿಕ್ಕಿಲ್ಲ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.