ಹತ್ರಾಸ್: ಸತ್ಸಂಗವೊಂದರಲ್ಲಿ ಕಾಲ್ತುಳಿತ ಉಂಟಾಗಿ, ಸೃಷ್ಟಿಯಾದ ಗೊಂದಲದಲ್ಲಿ ಮೃತಪಟ್ಟವರ ಸಂಖ್ಯೆ ೧೨೦ಕ್ಕೆ ಏರಿಕೆಯಾಗಿದ್ದು, ಉತ್ತರ ಪ್ರದೇಶ ಸರಕಾರ ಮೃತರಿಗೆ ತಲಾ 2 ಲಕ್ಷ ರು.ಪರಿಹಾರ ಘೋಷಣೆ ಮಾಡಿದೆ.
ಬೋಲೆ ಬಾಬಾ ಆಶ್ರಮದಲ್ಲಿ ನಡೆದಿದ್ದ ಸತ್ಸಂಗದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಭಕ್ತಾಧಿಗಳು ಓಡಲು ಶುರು ಮಾಡಿದರು. ಇದರಿಂದಾಗಿ ನೂಕುನುಗ್ಗಲು ಉಂಟಾಗಿ, ಕಾಲ್ತುಳಿತಕ್ಕೆ ಸಿಲುಕಿ ೧೨೦ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ಸುಮಾರು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಇಟಾಹ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.