ಬೆಂಗಳೂರು: ಆಗಸ್ಟ್ ತಿಂಗಳ ಮೊದಲ ವಾರದವರೆಗೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಜೋರಾಗಿ ಮುಂಗಾರು ಮಳೆ ಸುರಿಯಲಿದೆ.
ಇನ್ನು ಚಾಮರಾಜನಗರ, ಮೈಸೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮುಂಗಾರು ಮಳೆ ಸುರಿಯಲಿದೆ.
ಜೊತೆಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.