ಬೆಂಗಳೂರು: ಜೂನ್ 20 ಗುರುವಾರದಂದು ರಾಜ್ಯದ ಕರಾವಳಿ ಪ್ರದೇಶಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯದ ಹವಾಮಾನ ಇಲಾಖೆ ತಿಳಿಸಿದೆ.
ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ರಾಜ್ಯದ ನಾನಾ ಕಡೆ ಗುರುವಾರ ಬಿರುಗಾಳಿ ಸಹಿತ (ಗಂಟೆಗೆ 30 ರಿಂದ 40 ಕಿ.ಮೀ) ಹಗುರದಿಂದ ಸಾಧಾರಣ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ರಾಜ್ಯದ ಹವಾಮಾನ ಇಲಾಖೆ ತಿಳಿಸಿದೆ.

