ಜಮ್ಮು ಮತ್ತು ಕಾಶ್ಮೀರದಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸುತ್ತಿದ್ದು, ಮಳೆ ಮತ್ತಷ್ಟು ಮುಂದುವರಿದಿದೆ.
ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ೧೨ ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತದಂತಹ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಸಿಲ್ ನಾಗಸೇನಿ, ಮುಘಲ್ ಮೈದಾನ ಮತ್ತು ಕಿಶ್ತ್ವಾರ್ ಪ್ರದೇಶದಲ್ಲಿನ ೧೨ ಮನೆಗಳಿಗೆ ಹಾನಿಯಾಗಿದ್ದು, ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಹಸ್ತಾಂರಿಸುವ ಕೆಲಸವನ್ನು ಮಾಡಲಾಗುತ್ತಿದೆ. ರೆಡ್‌ಕ್ರಾಸ್ ತಂಡ ಸಂಸ್ತçಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ.
ಪೂಂಚ್ ಜಿಲ್ಲೆಯ ಮಂಡಿ ಪ್ರದೇಶದ ಬೀದರ್ ಗ್ರಾಮದಲ್ಲಿ ಭೂಕುಸಿತ ಉಂಟಾಗಿರುವ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.