ಬೆಂಗಳೂರು: ಹುಬ್ಬಳ್ಳಿ ಗಲಣೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದವರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಶಾಕ್ ನೀಡಿದೆ.
ರಾಜ್ಯ ಸರಕಾರದ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್, ಹುಬ್ಬಳ್ಳಿ ಗಲಭೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದವರ ಮೇಲಿನ ಪ್ರಕರಣಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಹುಬ್ಬಳ್ಳಿ ಗಲಭೆ ಸೇರಿದಂತೆ 43 ಪ್ರಕರಣಗಳನ್ನು ಹಿಂಪಡೆಯುವ ಆದೇಶ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ, ಗಿರೀಶ್ ಭಾರಧ್ವಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಹಾಗೂ ಕೆ.ಪಿ.ಅರವಿಂದ್ ಕುಮಾರ್ ವರ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ.