ಅಪರಾಧ ಸುದ್ದಿ

ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ: ಡಿ.ರೂಪಾ ದಾಖಲಿಸಿದ್ದ ಮಾನಹಾನಿ ಪ್ರಕರಣ

Share It

ಬೆಂಗಳೂರು: ಐಪಿಎಸ್‌ ಅಧಿಕಾರಿ ರೂಪಾ ಡಿ ಮೌದ್ಗಿಲ್ ಅವರ ವಿರುದ್ಧ ಮಾಧ್ಯಮಗಳಲ್ಲಿ ಮಾನ ಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

ಈ ಆದೇಶದಿಂದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹಿನ್ನಡೆಯಾಗಿದ್ದು, ಪ್ರಕರಣ ಸಂಬಂಧ ವಿಚಾರಣಾ ನಾಯಾಲಯದಲ್ಲಿ ನ್ಯಾಯಿಕ ಪ್ರಕ್ರಿಯೆ ಮುಂದುವರೆಯಲಿದೆ.

ತಮ್ಮ ವಿರುದ್ಧ ರೂಪಾ ಡಿ.ಮೌದ್ಗಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸಬೇಕು ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಯದ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ಅವರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇಂದು ಆದೇಶ ಪ್ರಕಟಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.


Share It

You cannot copy content of this page