ಬೆಂಗಳೂರು: ಮೂಡಾ ಮಾಜಿ ಆಯುಕ್ತ ದಿನೇಶ್ ಕುಮಾರ್‌ಗೆ ಹೈಕೋರ್ಟ್ ಶಾಕ್ ನೀಡಿದ್ದು, ಬಿಡುಗಡೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಮೂಡಾ ಹಗರಣದ ಆರೋಪದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ದಿನೇಶ್ ಕುಮಾರ್, ತಮ್ಮ ಮೇಲಿರುವ ಪ್ರಕರಣ ರದ್ದು ಕೋರಿ ಬಿಡುಗಡೆಗೆ ಮನವಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ
ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.

