ಬೆಂಗಳೂರು: ವಿವಿಧ ವಿದೇಶಿ ಕಂಪನಿಗಳಿಂದ ಪಡೆದಿರುವ 960 ಕೋಟಿ ರೂ ಹೂಡಿಕೆ ಹಣವನ್ನು ಭಾರತದ ಕಂಪನಿಗಳಲ್ಲಿ ಷೇರು ಖರೀದಿಸಲು ವಿನಿಯೋಗಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಕಾಫಿ ಡೇ ಸಿಇಒ ಮಾಳವಿಕಾ ಹೆಗ್ಡೆ ಅವರಿಗೆ ಇ.ಡಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ 2022 ರ ನವೆಂಬರ್ 3 ರ ದೂರು ಮತ್ತು ನವೆಂಬರ್ 23 ರಂದು ಜಾರಿ ಮಾಡಿರುವ ಶೋಕಾಸ್ ನೋಟಿಸ್ ರದ್ದತಿ ಕೋರಿ ಮಾಳವಿಕಾ ಹೆಗ್ಡೆ, ಸಲ್ಲಿಸಿದ್ದ ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಅವರ ಏಕಸದಸ್ಯ ಪೀಠದ ಮುಂದೆ ನಡೆಯಿತು. ವಿಚಾರಣೆ ಆಲಿಸಿದ ನ್ಯಾಯಾಧೀಶರು ಇಡಿ ನೋಟಿಸ್‌ಗೆ ತಡೆ ನೀಡಿ ವಿಚಾರಣೆ ಮುಂದೂಡಿದರು.
ಆತ್ಮಹತ್ಯೆ ಮಾಡಿಕೊಂಡ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಪತ್ನಿ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪುತ್ರಿಯೂ ಆದ ಮಾಳವಿಕಾ ಅವರ ವಿರುದ್ಧ ಇಡಿ ಸಮನ್ಸ್ ಜಾರಿ ಮಾಡಿತ್ತು. ಮಾಳವಿಕಾ ಡಿ.ಕೆ.ಶಿವಕುಮಾರ್ ಅವರ ಸಂಬAಧಿಕರೂ ಕೂಡ ಆಗಿದ್ದಾರೆ.

