ಅಪರಾಧ ಸುದ್ದಿ

ಹಾಸನ ಬಳಿ ಭೀಕರ ಅಪಘಾತ: ಹೊಸಕೋಟೆ ಮೂಲದ ಆರು ಮಂದಿ ಸಾವು

Share It

ಹಾಸನ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಹಾಸನ ಹೊರವಲಯದಲ್ಲಿ ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ) ಹಾಗು ರಾಕೇಶ್ (ಚಾಲಕ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಇಟಿಯೋಸ್ ಕಾರಿನಲ್ಲಿ ತೆರಳಿದ್ದರು.

ಸಂಬಂಧಿಕರನ್ನು ಆಸ್ಪತ್ರೆಯಲ್ಲಿ ನೋಡಿಕೊಂಡು ವಾಪಸ್ ಊರಿಗೆ ತರಳುವ ಸಂದರ್ಭದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಘಟನೆಯ ಸ್ಥಳಕ್ಕೆ ಹಾಸನ ಎಸ್‌ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.


Share It

You cannot copy content of this page