ಸುದ್ದಿ

Hoskote: ಮಾದಕ ವಸ್ತು ಮಾರಾಟ, 8 ಮಂದಿ ಬಂಧನ

Share It

ವರದಿ: ನಾರಾಯಣಸ್ವಾಮಿ ಸಿ.ಎಸ್

ಹೊಸಕೋಟೆ: ಹೊಸಕೋಟೆ ಉಪವಿಭಾಗದ ತಿರುಮಲಶೆಟ್ಟಿಹಳ್ಳಿ ಪೊಲೀಸ್‌ ಠಾಣೆ ಮತ್ತು ನಂದಗುಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಿವೈಎಸ್‌ಪಿ ಮಲ್ಲೇಶ್ ಅವರ ನೇತೃತ್ವದಲ್ಲಿ ಟಿ.ಎಸ್‌.ಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಸುಂದರ್ ಹಾಗೂ ನಂದಗುಡಿ ಠಾಣೆ ಇನ್ ಸ್ಪೆಕ್ಟ‌ರ್ ಶಾಂತರಾಮ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು5 ಕೆಜಿ 500 ಗ್ರಾಂ ಗಾಂಜಾ ಹಾಗೂ ಎಂಡಿಎಂಎ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತಿರುಮಲಶೆಟ್ಟಿಹಳ್ಳಿ ಮತ್ತು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page