ಸುದ್ದಿ

ಸತತ ಮಳೆಯಿಂದ ಮನೆ ಗೋಡೆ ಕುಸಿದು ಮಕ್ಕಳು ಸೇರಿ ಮೂವರು ಸಾವು

Share It

ಹಾವೇರಿ : ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇವರ ತಾಯಿ ಚೆನ್ನಮ್ಮ (30) ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನು ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Share It

You cannot copy content of this page