ಅಪರಾಧ ಸುದ್ದಿ

ಬೆಳಗಾವಿ: ಗದ್ದೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನ ಕೊಲೆ

Share It

ಬೆಳಗಾವಿ: ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿ ವ್ಯಕ್ತಿಯೊಬ್ಬನನ್ನು ಮೆಕ್ಕೆಜೋಳದ ಗದ್ದೆಯಲ್ಲಿ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿರೇನಂದಿಹಳ್ಳಿಯಲ್ಲಿ ನಡೆದಿದೆ.

ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ ಕೋಟಿ ಎಂಬ 50 ವರ್ಷದ ವ್ಯಕ್ತಿಯೇ ಕೊಲೆಯಾದವನು. ಈತನನ್ನು ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಕೊಲೆಯ ನಂತರ ಆತನ ಮರ್ಮಾಂಗವನ್ನು ಕತ್ತರಿಸಿರುವುದು ಕಂಡುಬAದಿದೆ. ಈ ಹಿನ್ನೆಲೆಯಲ್ಲಿ ಇದೊಂದು ಅನೈತಿಕ ಸಂಬAಧದ ವಿಚಾರಕ್ಕೆ ನಡೆದಿರುವ ಕೊಲೆ ಎಂದು ಪೊಲೀಸರು ಅನುಮಾನ ಪಟ್ಟಿದ್ದಾರೆ.

ಕಲ್ಮೇಶ್ ಕೋಟಿ ತುಮಕೂರಿನ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಆಗಮಿಸಿದ್ದ. ಗ್ರಾಮದಲ್ಲಿ ಆತ ತನ್ನ ವೃದ್ಧ ತಂದೆ ತಾಯಿಯ ಜತೆಗೆ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಹತ್ತು ವರ್ಷಗಳ ಹಿಂದೆ
ಪತ್ನಿಯಿಂದ ದೂರವಾಗಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೊಲೆಯ ಮಾಹಿತಿ ತಿಳಿಯುತ್ತಿದ್ದಂತೆ ಆತನ ಪತ್ನಿ ಮತ್ತು ಮಗ ಸ್ಥಳಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ರಾಮರಾಜನ್ ಭೇಟಿ ನೀಡಿದ್ದು, ವಿಚಾರಣೆ ನಡೆಸಿದ್ದಾರೆ. ಹಣಕಾಸು, ಆಸ್ತಿ ಹಾಗೂ ಹೆಣ್ಣಿನ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂಬ ಸಾಧ್ಯತೆಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.


Share It

You cannot copy content of this page