ಹುಬ್ಬಳ್ಳಿ: ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿ ಕೊಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಗೆ ಜೂ. 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ್ ಮಾದರಿಯಲ್ಲೇ ಕೊಲೆ ಮಾಡುತ್ತೇನೆಂದು ಮೊಬೈಲ್ ನಲ್ಲಿ ಬೆದರಿಕೆ ಹಾಕಿದ್ದ ಅಂಜಲಿ ಪ್ರಿಯಕರ ವಿಶ್ವ ಅಲಿಯಾಸ್ ಗಿರೀಶ್ ನೇರವಾಗಿ ಹುಬ್ಬಳ್ಳಿಯ ಮನೆಗೆ ರಾತ್ರೋರಾತ್ರಿ ನುಗ್ಗಿ ಅಂಜಲಿ ಅಂಬಿಗೇರಾಳನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಹಂತಕ ವಿಶ್ವ ಅಲಿಯಾಸ್ ಗಿರೀಶ್ ಗೆ ಇಂದು ಕೋರ್ಟ್ ಜೂನ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
