ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಂತರ ರುಪಾಯಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಹೈಡ್ರೋ ಗಾಂಜಾವನ್ನು ಬ್ಯಾಂಕಾಕ್ನಿಂದ ದೆಹಲಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

