ಬೀದರ್: ಸಿಎಂ ಬದಳಾವಣೆ ವಿಚಾರ ನನಗೆ ಗೊತ್ತಿಲ್ಲ, ಶಾಸಕರ ವಿದೇಶ ಪ್ರವಾಸದ ಬಗ್ಗೆ ನನಗೆ ಮಾಧ್ಯಮಗಳ ಮೂಲಕವಷ್ಟೇ ಗೊತ್ತಾಗಿದೆ. ನನಗೆ ಗೊತ್ತಿರುವಂತೆ ಇದೊಂದು ಅಧ್ಯಯನ ಪ್ರವಾಸವಿರಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಬೀದರ್ ನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನನಗೆ ಸಿಎಂ ಸ್ಥಾನದ ಬದಲಾವಣೆಯ ಬಗ್ಗೆ ಅಷ್ಟೇನೂ ಗೊತ್ತಿಲ್ಲ. ಸುಮ್ಮನೆ ನಾನು ಏನೇ ಮಾತನಾಡಿದರೂ ನಮ್ಮ ಪಕ್ಷಕ್ಕೆ ಹಾನಿಯಾಗುತ್ತದೆ. ಹೀಗಾಗಿ, ನಾನು ನನಗೆ ಗೊತ್ತಿಲ್ಲದ ವಿಷಯದ ಬಗ್ಗೆ ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.
ಶಾಸಕರ ವಿದೇಶ ಪ್ರವಾಸದ ಬದ್ದೆ ಮಾತನಾಡಿದ ಅವರು, ಶಾಸಕರು ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಆದರೆ, ಅದರ ಬಗ್ಗೆ ನನಗೇನೂ ಅಷ್ಟು ಗೊತ್ತಿಲ್ಲ. ಆದರೆ, ಇದೊಂದು ಅಧ್ಯಯನ ಪ್ರವಾಸ ಎಂದು ಹೇಳಲಾಗುತ್ತಿದೆ. ಇದರಿಂದ ಸಮಸ್ಯೆಯೇನು ಎಂದು ಪ್ರಶ್ನಿಸಿದರು.

