ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪದಲ್ಲಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ಅಪಾರ್ಟ್ಮೆಂಟ್ ಮತ್ತು ಬಳ್ಳಾರಿ ನಗರದ ನಾಗೇಂದ್ರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ. ಹಗರಣ ಸಂಬಂಧ ಯಾವುದಾದರೂ ದಾಖಲೆ ಸಿಗಬಹುದಾ ಎಂಬ ಅನುಮಾನದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ವಾಲ್ಮೀಕಿ ನಿಗಮದಲ್ಲಿ187 ಕೋಟಿ ರುಪಾಯಿಗಳ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ನಿಗಮದ ಸಿಬ್ಬಂದಿ ಆತ್ಮಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಸಿಐಡಿ ತನಿಖೆ ನಡೆಸುತ್ತಿದೆ. ಈ ನಡುವೆ ಹಣಕಾಸಿನ ವಹಿವಾಟು ನಡೆದಿರುವ ಆರೋಪದಲ್ಲಿ ಬ್ಯಾಂಕ್ ಸಿಬ್ಬಂದಿ ವಜಾ ಮಾಡಲಾಗಿದೆ
ಹೀಗಾಗಿ, ಇಡಿ ಕೂಡ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ನಾಗೇಂದ್ರ ಮನೆಯ ಮೇಲೆ ದಾಳಿ ನಡೆಸಿದೆ. ಪ್ರಕರಣದಲ್ಲಿ ತಮಗೂ ಇದಕ್ಕೂ ಸಂಬಂಧವಿಲ್ಲ ಎಂದು ನಾಗೇಂದ್ರ ವಾದ ಮಾಡುತ್ತಲೇ ಬಂದಿದ್ದಾರಾದರೂ, ಹಣ ವರ್ಗಾವಣೆಗೆ ಬಳಸಿರುವ ಮಾರ್ಗ ಅವರನ್ನೇ ಹಿಂಬಾಲಿಸುತ್ತಿದೆ.
