ಬೆಂಗಳೂರು: ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟರೆ ಆ ಪ್ರಯಾಣಿಕರ ಕುಟುಂಬಕ್ಕೆ ರೈಲ್ವೆ ಇಲಾಖೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ರೈಲು ಇಳಿಯುವಾಗ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ಜಯಮ್ಮ ಎಂಬುವರ ಸಾವಿಗೆ ಪರಿಹಾರ ಕಲ್ಪಿಸಲು ರೈಲ್ವೆ ಪರಿಹಾರ ನ್ಯಾಯಮಂಡಳಿ ನಿರಾಕರಿಸಿತ್ತು. ಇದನ್ನೂ ಪ್ರಶ್ನಿಸಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ನಿವಾಸಿ ರೋಜಮಣಿ ಹಾಗೂ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ ಅವರ ಏಕಸದಸ್ಯ ಪೀಠ, ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ವಾರ್ಷಿಕ ಶೇ.7 ಬಡ್ಡಿಯೊಂದಿಗೆ 4 ಲಕ್ಷ ರೂ. ಪರಿಹಾರ ಪಾವತಿಸಲು ರೈಲ್ವೆ ಇಲಾಖೆಗೆ ನಿರ್ದೇಶನ ನೀಡಿದೆ. ಜೊತೆಗೆ, ಚಲಿಸುತ್ತಿರುವ ರೈಲಿನಿಂದ ಇಳಿಯುವ ವೇಳೆ ಪ್ರಯಾಣಿಕರು ಸಾವಿಗೀಡಾದರೆ, ಹಕ್ಕುದಾರರಿಗೆ ಪರಿಹಾರವನ್ನು ಪಾವತಿಸಬೇಕಾಗಿರುವುದು ರೈಲ್ವೆ ಇಲಾಖೆ ಕರ್ತವ್ಯವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮೃತ ಜಯಮ್ಮ ತನ್ನ ಸಹೋದರಿಯೊಂದಿಗೆ ತಪ್ಪಾಗಿ . ಸಾವಿಗೀಡಾದರು. ಈ ಘಟನೆಗೆ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ರೈಲ್ವೆ ನ್ಯಾಯಮಂಡಳಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೃತರ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು.