ರಾಜಕೀಯ ಸುದ್ದಿ

ಕಾಂಗ್ರೆಸ್ ನವರು ಗ್ಯಾರೆಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

Share It

ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ, ಬಿ.ವೈ, ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ರೋಡ್ ಶೋ

ಹಾವೇರಿ: ಕಾಂಗ್ರೆಸ್ ನವರು ಗ್ಯಾರೆಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ನವರು ಮತ್ತೆ ಗ್ಯಾರೆಂಟಿ ಕಾರ್ಡ್ ಹಂಚಲು ಶುರು ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಯುವಕರಿಗೆ ಒಂದು ಲಕ್ಷ ಕೊಡುತ್ತೇವೆ ಅಂತ ಹೇಳಿದ್ದಾರೆ. 543 ಕ್ಚೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿರುವುದೇ 200 ಕ್ಷೆತ್ರಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನ ಬೇಕು. 200 ಸ್ಥಾನದಲ್ಲಿ ಸ್ಪರ್ಧಿಸಿರುವ ಇವರು ಅಧಿಕಾರಕ್ಕೆ ಬರಲು ಸಾದ್ಯವೇ ಇಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಈಗ ಕೊಡುತ್ತಿರುವ ಗ್ಯಾರೆಂಟಿನೇ ಗಳಗಂಟಿಯಾಗಿದ್ದಾವೆ. ಗೃಹಲಕ್ಷ್ಮಿ ಯೋಜನೆ ಎಷ್ಟು ಜರಿಗೆ ತಲುಪಿದೆ. ಬೆಂಗಳೂರು ಬಿಟ್ಟಿದೆ. ಊರುಗಳಿಗೆ ಬಂದಿಲ್ಲ. ಕೇವಲ ಪ್ರಗತಿಯಲ್ಲಿದೆ ಅಂತ ಹೇಳುತ್ತಾರೆ. ಬಹುತೇಕರಿಗೆ ಗ್ಯಾರೆಂಟಿ ತಲುಪುತ್ತಿಲ್ಲ ಎಂದು ಹೇಳಿದರು.
ಹಾವೇರಿ ಗದಗ ಜಿಲ್ಲೆ ಮಾಡಿದ್ದು ಜೆಎಚ್ ಪಟೇಲರು, ತುಂಗಾ ಮೇಲ್ದಂಡೆ ಯೋಜನೆ ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು‌ ನೀರಾವರಿ ಸಚಿವನಾಗಿದ್ದಾಗ ಜಾರಿ ಮಾಡಿದ್ದೇವು. ಗದಗ ಜಿಲ್ಲೆಯಲ್ಲಿ ಸಿಂಗಟಾಲೂರು ಯೋಜನೆ ಜಾರಿ ಮಾಡಿದ್ದು ಬಿಜೆಪಿ ಸರ್ಕಾರ. ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾವೇರಿ ಜಿಲ್ಲೆಯಲ್ಲಿ ಎಂಟು ಏತ ನೀರಾವರಿ ಯೋಜನೆಗಳನ್ನು ಮಾಡಿದ್ದೇವೆ. ಅವು ಶೇ 90 ರಷ್ಟು ಕಾರ್ಯ ಮುಕ್ತಾಯವಾಗಿದೆ. ಅದನ್ನು ಪೂರ್ಣಗೊಳಿಸಲು ಈಗಿನ ಸರ್ಕಾರಕ್ಕೆ ಆಗಿಲ್ಲ.
ಹಾವೇರಿಗೆ ಮೆಡಿಕಲ್ ಕಾಲೆಜ್, ಮೆಗಾ ಡೈರಿ ನಾವು ಅಧಿಕಾರದಲ್ಲಿದ್ದಾಗ ತಂದಿದ್ದೇವೆ. ವಿಶ್ವ ವಿದ್ಯಾಲಯ ನಾವು ತಂದಿದ್ದೇವೆ ಅದಕ್ಕೆ ಹಣ ಕೊಡಲು ಇವರಿಗೆ ಆಗುತ್ತಿಲ್ಲ. ಈ ಜಿಲ್ಲೆಗೆ ಒಬ್ಬ ಮಂತ್ರಿ ಮಾಡಲು ಇವರಿಗೆ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ದೆಶಕ್ಕೆ ಮೋದಿ ಮತ್ತೆ ಬರಬೇಕಿದೆ. ಸೋನಿಯಾ ಗಾಂಧಿ ತಮ್ಮ ಸುತ್ತಲೂ ಕತ್ತಲಿದೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಇನ್ನೂ ಹತ್ತು ವರ್ಷ ಕತ್ತಲು ಇರುತ್ತದೆ. ದೇಶಾದ್ಯಂತ ಬೆಳಕು ಇರುತ್ತದೆ.
ಮೋದಿಯವರು ಕೊರೊನಾ ಸಂದರ್ಭದಲ್ಲಿ ಎಲ್ಲರಿಗೂ ಲಸಿಕೆ ಕೊಟ್ಟಿದ್ದಾರೆ. ಮನೆ ಮನೆಗೆ ನೀರು ಕೊಡುತ್ತಿದ್ದಾರೆ. ಮನೆ ಮನೆಗೆ ಅನ್ನ ಕೊಡುತ್ತಿದ್ದಾರೆ. ರೈತನಿಗೆ ಕಿಸಾನ್ ಸನ್ಮಾನ ನೀಡಿದ್ದಾರೆ. ಅವರಿಗೆ ಮತ ಹಾಕುವ ಮೂಲಕ ಕೃತಜ್ಞತೆ ಸಲ್ಲಿಸಬೇಕು ಎಂದು ಮನವಿ ಮಾಡಿದರು.


Share It

You cannot copy content of this page